ಸುಳ್ಯ ಡಿ 17: ಇಲ್ಲಿನ ಸಂಪಾಜೆಯ ಎನ್.ಎಸ್ ದೇವಿಪ್ರಸಾದ್ರವರ ಪುತ್ರ, ಸುಳ್ಯದಲ್ಲಿ ನ್ಯಾಯವಾದಿಯಾಗಿರುವ ಎನ್.ಡಿ ದೇವಿಚರಣ್ (39) ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಡಿ 16 ತಡರಾತ್ರಿ ಸಂಪಾಜೆಯಲ್ಲಿ ತನ್ನ ಮನೆಯಲ್ಲಿ ಅವರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಸಂಪಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ, ಮಹಜರು ಆರಂಭಿಸಿದ್ದಾರೆ. ಕೌಟುಂಬಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.