ಮೂಡುಬಿದಿರೆ, ಜು 23 (DaijiworldNews/SM): ಕೇರಳ ಹಾಗೂ ಮೂಡುಬಿದಿರೆ ವಿಶಾಲನಗರದಲ್ಲಿ ಭಾನುವಾರ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನೀರಿನಲ್ಲಿ ಮುಳುಗಿ ಇಬ್ಬರು ಮೃತಪಟ್ಟಿದ್ದಾರೆ.
ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಕೂಲಿ ಕಾರ್ಮಿಕರೊಬ್ಬರು ತೋಡು ದಾಟುವಾಗ ಕೋಟೆಬಾಗಿಲಿನ ಹಲಕ್ಕಿ ನಿವಾಸಿ ಜಯರಾಮ ಸಾಲ್ಯಾನ್(55) ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ.
ಕೂಲಿ ಕಾರ್ಮಿಕರಾಗಿದ್ದ ಜಯರಾಮ ಭಾನುವಾರ ಬೆಳಗ್ಗೆ ನೆರೆಮನೆಯಲ್ಲಿ ಸಣ್ಣ ಪುಟ್ಟ ಕೆಲಸ ಮಾಡಿ ವಾಪಾಸು ಮನೆಗೆ ಹೊರಟಿದ್ದರು. ತೋಡಿಗೆ ಅಡ್ಡಲಾಗಿ ಹಾಕಿದ್ದ ಅಡಿಕೆ ಮರದ ತುಂಡಿನಲ್ಲಿ ದಾಟುವಾಗ ಕಾಲು ಜಾರಿಗೆ ನೀರು ಹರಿಯುತ್ತಿದ್ದ ತೋಡಿಗೆ ಬಿದ್ದು ಸಾವನಪ್ಪಿದ್ದಾರೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಮೃತರಿಗೆ ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಮೂಡುಬಿದಿರೆ ನಿವಾಸಿ ಕೇರಳದಲ್ಲಿ ಹೊಳೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕೇರಳದ ಪಾಂಡಿಕ್ಕಾಡ್ಗೆ ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿದ್ದ ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ವಿಶಾಲನಗರ ನಿವಾಸಿ ಉಸ್ಮಾನ್(34) ಹೊಳೆಯಲ್ಲಿ ಸ್ನಾನಕ್ಕೆಂದು ಇಳಿದಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಉಸ್ಮಾನ್ ಅವರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ.