ವಿಟ್ಲ, ಜು 30 (DaijiworldNews/SM): ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.
ವಿಟ್ಲ ಸಮೀಪದ ನಿವಾಸಿ ಬಾಲಕೃಷ್ಣ ಬಂಧಿತ ಆರೋಪಿಯಾಗಿದ್ದಾನೆ. ಇಲ್ಲಿನ ನಿವಾಸಿ 14 ವರ್ಷದ ಅಪ್ರಾಪ್ತ ಬಾಲಕಿ ಜು.25ರಂದು ಶಾಲೆಗೆ ತೆರಳಿದವಳು, ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದಳು. ಈ ಬಗ್ಗೆ ಬಾಲಕಿಯ ತಾಯಿ ವಿಟ್ಲ ಠಾಣೆಗೆ ಅಪಹರಣದ ಬಗ್ಗೆ ದೂರು ನೀಡಿದ್ದರು.
ತಾಯಿ ನೀಡಿದ ದೂರಿನಂತೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ತನಿಖೆ ಕೈಗೆತ್ತಿಕೊಂಡ ಪೊಲೀಸರು ಬಾಲಕಿಯನ್ನು ಬೆಂಗಳೂರಿನಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಬಾಲಕಿಯ ವಿಚಾರಣೆ ನಡೆಸಿದ ಸಂದರ್ಭ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಪೊಲೀಸರು ಪೊಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.