ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಮಲ ಅರಳಿದೆ.ವಿಧಾನಸಭೆಯ ಒಟ್ಟು 68 ಕ್ಷೇತ್ರಗಳಲ್ಲ್ಲಿ ಬಿಜೆಪಿ 40 ಸ್ಥಾನಗಳನ್ನು ಪಡೆಯುವ ಮೂಲಕ ಸ್ಪಷ್ಟ ಬಹುಮತ ಪಡೆದು ಅಧಿಕಾರದ ಗದ್ದುಗೆ ಏರಲು ಸಿದ್ಧವಾಗಿದೆ. ಈ ಹಿಂದೆ ಆಡಳಿತಾರೂಢ ಕಾಂಗ್ರೆಸ್ ಪಕ್ಷ 24 ಸ್ಥಾನಗಳನ್ನು ಪಡೆದು ಅಧಿಕಾರ ಕಳೆದುಕೊಂಡು 2ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ನಾಲ್ಕು ಕ್ಷೇತ್ರಗಳಲ್ಲಿ ಇತರ ಪಕ್ಷಗಳು ಮುನ್ನಡೆ ಸಾಧಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಅಧಿಕಾರ ಗದ್ದುಗೆ ಏರಲು 35 ಸ್ಥಾನಗಳ ಬಹುಮತ ಅಗತ್ಯ ವಿದ್ದು ಈಗಾಗಲೇ ಬಿಜೆಪಿ ೪೦ ಸ್ಥಾನಗಳನ್ನು ಪಡೆದುಕೊಂಡಿದೆ. ಇನ್ನು 2012ರ ವಿಧಾನಸಭಾ ಚುನಾವಣೆಯಲ್ಲಿ 68 ಸದಸ್ಯಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷ 36 ಸ್ಥಾನ ಪಡೆದು ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಬಿಜೆಪಿ 27 ಸ್ಥಾನ ಪಡೆದು ಪ್ರತಿಪಕ್ಷ ಸ್ಥಾನದಲ್ಲಿ ಕುಳಿತಿತ್ತು. ವೀರಭದ್ರ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾದೇಶ ಹೊರಬಿದ್ದಿದ್ದು, ಮತದಾರ ಬಿಜೆಪಿಗೆ ಅಧಿಕಾರದ ಚುಕ್ಕಾಣಿ ನೀಡಿದ್ದಾರೆ.