ಮಂಗಳೂರು, ಜು 02 (Daijiworld News/MSP): ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನದಲ್ಲಿ ಸಹ ಸವಾರೆಯಾಗಿ ಸಂಚರಿಸಿದ್ದ ಮಹಿಳಾ ಫಾರೆಸ್ಟ್ ಗಾರ್ಡ್ ಗೆ ಸಂಚಾರಿ ಪೊಲೀಸರು ದಂಡ ವಿಧಿಸಿದ್ದಾರೆ.
ಉಪ್ಪಿನಂಗಡಿಯಲ್ಲಿ ಫಾರೆಸ್ಟ್ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳೆ ನಗರದ ಬಲ್ಮಠ ರಸ್ತೆಯಲ್ಲಿ ಹೆಲ್ಮೆಟ್ ಧರಿಸದೆ ಗಂಡನ ಜೊತೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದು, ಇದನ್ನು ನೋಡಿದ ಸಾರ್ವಜನಿಕರು " ಪೋಟೋ ತೆಗೆದು ಖಾಕಿ ಸಮವಸ್ತ್ರ ಧರಿಸಿದ್ದ ಮಹಿಳೆಯಿಂದ ಟ್ರಾಫಿಕ್ ನಿಯಮ ಉಲ್ಲಂಘನೆ " ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದರು.
ಮೊಬೈಲ್ ಗಳಲ್ಲಿ ಈ ಪೋಟೋ ಹರಿದಾಡುತ್ತಿದ್ದಂತೆ ನಗರದ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಬೈಕ್ ನಂಬರ್ ಆಧಾರದಲ್ಲಿ ಪತ್ತೆ ಹಚ್ಚಲಾಯಿತು. ನಂತರ ಫಾರೆಸ್ಟ್ ಗಾರ್ಡ್ ಮಹಿಳೆಯನ್ನು ಠಾಣೆಗೆ ಕರೆಸಿ ದಂಡ ವಿಧಿಸಿ ಕಳುಹಿಸಿಕೊಡಲಾಯಿತು. ಇವರು ಬಳ್ಳಾರಿ ಮೂಲದವರೆಂದು ತಿಳಿದುಬಂದಿದೆ.