ಬಂಟ್ವಾಳ, ಆ.05(Daijiworld News/SS): ಜಿಲ್ಲೆಯಲ್ಲಿ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಚಿಕ್ಕಮಗಳೂರಿನಲ್ಲಿ ದಸ್ತಗಿರಿ ಮಾಡಿದ್ದಾರೆ.
ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಮೊಹಮ್ಮದ್ ಆಸೀಪ್ ಬಂಧಿತ ಆರೋಪಿ.
ಮೊಹಮ್ಮದ್ ಆಸೀಪ್ ಹಲವು ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ. ಈತನ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣೆ ಹಾಗೂ ಪಣಂಬೂರು ಪೊಲೀಸ್ ಠಾಣೆಯಲ್ಲಿ ಹಲವಾರು ಪ್ರಕರಣಗಳು ದಾಖಲಾಗಿದೆ ಎಂದು ಪೊಲಿಸ್ ಮೂಲಗಳು ತಿಳಿಸಿದೆ.
ಇದೀಗ ಈ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಚಿಕ್ಕಮಗಳೂರಿನಲ್ಲಿ ದಸ್ತಗಿರಿ ಮಾಡಿದ್ದಾರೆ.