ಬೆಳ್ತಂಗಡಿ, ಆ.06 (Daijiworld News/RD): ನಗರದ ನ್ಯಾಯಾಲಯದಲ್ಲಿ ಕ್ಯಾಂಟೀನ್ ನಡೆಸುತ್ತಿದ್ದ ವ್ಯಕ್ತಿಯೋರ್ವರು ಜಾಂಡಿಸ್ ಸಮಸ್ಯೆಯಿಂದ ಬಳಲುತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆ 5 ರ ಸೋಮವಾರ ಮುಂಜನೆ ಮೃತಪಟ್ಟಿದ್ದಾರೆ.
ಮೃತಪಟ್ಟ ವ್ಯಕ್ತಿ ಉಜಿರೆ ಅಜಿತ್ ನಗರ ನಿವಾಸಿ ಆನಂದ ಶೆಟ್ಟಿ (50) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ನ್ಯಾಯಾಲಯ ಆವರಣದಲ್ಲಿ ಕಳೆದ 10 ವರ್ಷಗಳಿಂದ ಕ್ಯಾಂಟೀನ್ ನಡೆಸುತ್ತಿದ್ದ ಅವರು ಕಳೆದ ಕೆಲ ದಿನಗಳಿಂದ ಜಾಂಡಿಸ್ಗೆ ತುತ್ತಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಹೆಚ್ಚಿನ ಚಿಕಿತ್ಸೆಗೆ ಎ.ಜೆ.ಆಸ್ಪತ್ರೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮುಂಜಾನೆ 3.30ಕ್ಕೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.