ಕಾಸರಗೋಡು, ಆ 07 (Daijiworld News/MSP): ಯುವ ಕಾಂಗ್ರೆಸ್ ಕಾರ್ಯಕರ್ತರಾದ ಪೆರಿಯ ಕಲ್ಯೊಟ್ ನ ಕೃಪೇಶ್ ಮತ್ತು ಶರತ್ ಲಾಲ್ ಕೊಲೆ ಪ್ರಕರಣದ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಆರೋಪಿಗಳಾದ ಮುರಳಿ, ರಂಜಿತ್, ಪ್ರದೀಪ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು . ಕೃತ್ಯದಲ್ಲಿ ತಾವು ಭಾಗಿಯಾಗಿಲ್ಲ .ತಮ್ಮ ಮೇಲೆ ಆರೋಪ ಹೊರಿಸಲಾಗಿದೆ ಎಂದು ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಆದರೆ ಜಾಮೀನು ನೀಡಿದರೆ ಸಾಕ್ಷ್ಯ ನಾಶ ಹಾಗೂ ಅಹಿತಕರ ಘಟನೆಗೆ ಆಸ್ಪದವಾಗಲಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟು ಜಾಮೀನು ಅರ್ಜಿಯನ್ನು ತಿರಸ್ಕರಿಸಿತು.
ಫೆಬ್ರವರಿ ೧೭ ರಂದು ರಾತ್ರಿ ಕೃಪೇಶ್ ಮತ್ತು ಶರತ್ ಲಾಲ್ ರನ್ನು ಕೊಲೆ ಮಾಡಲಾಗಿತ್ತು.ಪ್ರಕರಣದಲ್ಲಿ ಸಿಪಿಎಂ ಸ್ಥಳೀಯ ಮುಖಂಡ ಸೇರಿದಂತೆ ೧೧ ಆರೋಪಿಗಳನ್ನು ಬಂಧಿಸಲಾಗಿತ್ತು.