ಮಂಗಳೂರು,ಆ.09 (Daijiworld News/RD): ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 10 ರ ಶನಿವಾರದಂದು ಕೂಡ ಶಾಲಾ ಕಾಲೇಜುಗಳಿಗೆ ರಜೆ ಘೊಷಣೆ ಮಾಡಲಾಗಿದೆ. ಸುರಕ್ಷತೆಯ ದೃಷ್ಠಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಜೆ ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಸೋಮವಾರದಿಂದ ಕರಾವಳಿ ಭಾಗದಲ್ಲಿ ಬಿರುಸಿನಿಂದ ಮಳೆ ಸುರಿಯುತ್ತಿದೆ. ಬುಧವಾರ ರಾತ್ರಿ ಭಾರೀ ಗಾಳಿ ಮಳೆ ಸುರಿದಿದೆ. ಆದರೆ, ಗುರುವಾರದಂದು ಒಂದಿಷ್ಟು ಬಿಡುವನ್ನು ಪಡೆದುಕೊಂಡಿತ್ತು. ಆದರೆ ಇಂದು ಮುಂಜಾನೆಯಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ನಾಳೆಯೂ ಕೂಡ ಮಳೆ ಆಗುವ ಸಾಧ್ಯತೆ ಇದ್ದು, ಈಗಾಗಲೇ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ. ಭಾರೀ ಮಳೆಯಿಂದಾಗಿ ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು, ಎಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಂಡಿದೆ. ಈಗಾಗಲೇ ಜಿಲ್ಲಾಡಳಿತ 6,7,8 ರಂದು ರೆಡ್ ಆಲರ್ಟ ಘೋಷಿಸಿದ್ದು, ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿರುವ ಪರಿಣಾಮವಾಗಿ ಈಗಾಗಲೇ ನದಿ ತೀರದಲ್ಲಿ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.