ಪುತ್ತೂರು,ಆ10 (Daijiworld News/RD): ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ನೆರೆ ಪೀಡಿತ ಪ್ರದೇಶಗಳಿಗೆ, ನಿರಾಶ್ರಿತರ ಕೇಂದ್ರಗಳಿಗೆ ಹಾಗೂ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಸಂಗಮ ಸ್ಥಳಕ್ಕೆ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಪುತ್ತೂರು ಶಾಸಕ ಶ್ರೀ ಸಂಜೀವ ಮಠಂದೂರುರವರೊಂದಿಗೆ ಭೇಟಿ ನೀಡಿದರು.
ನಂತರ ನೆರೆ ಸಂತ್ರಸ್ತರನ್ನು ಭೇಟಿಯಾಗಿ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ತುರ್ತು ಪರಿಹಾರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈಗಾಗಲೇ ರಾಜ್ಯ ಸರ್ಕಾರ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು, ಪುತ್ತೂರು, ಸುಳ್ಯ ತಾಲೂಕುಗಳು ಪ್ರವಾಹಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಪ್ರವಾಹಪೀಡಿತ ತಾಲೂಕುಗಳೆಂದು ಘೋಷಿಸಿರುವ ತಾಲೂಕುಗಳಲ್ಲಿ ಎಸ್ ಡಿ ಆರ್ ಎಫ್, ಎನ್.ಡಿ.ಆರ್.ಎಫ್. ಮಾರ್ಗಸೂಚಿ ಪ್ರಕಾರ ಜಿಲ್ಲಾಡಳಿತ ಅಗತ್ಯ ಪರಿಹಾರ ಕ್ರಮಗಳನ್ನು ಶೀಘ್ರವಾಗಿ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ.