ಮಂಗಳೂರು,ಆ.11(Daijiworld News/RD): ನಗರದ ಫಳ್ನೀರ್ ಸಮೀಪದ ರಸ್ತೆ ಬದಿಯಲ್ಲಿ ಶನಿವಾರ ಬೆಳಗ್ಗೆ ಕಂಡು ಬಂದ ಪ್ಲಾಸ್ಟಿಕ್ ಲಕೋಟೆಯನ್ನು ‘ಬಾಂಬ್’ ಎಂಬುದಾಗಿ ತಪ್ಪಾಗಿ ಭಾವಿಸಿ ವ್ಯಕ್ತಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ತಪಾಸಣೆ ನಡೆಸಿದಾಗ ಹುಸಿ ಕರೆ ಎನ್ನುವುದು ಬೆಳಕಿಗೆ ಬಂದಿದೆ.
ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ತಪಾಸಣೆ ನಡೆಸಿದಾಗ ಅದರಲ್ಲಿದ್ದುದು ಕೇವಲ ಕಸ-ಕಡ್ಡಿ ಮಾತ್ರ. ಇದನ್ನು ನಾಯಿಗಳು ಎಳೆದು ಹಾಕಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿತ್ತು. ಜತೆಗೆ, ಜೆಎನ್ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಡಾ.ಕನ್ಹಯ್ಯಕುಮಾರ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಬಗ್ಗೆ ಕೆಲ ಸಂಘಟನೆಗಳಿಂದ ವಿರೋಧವೂ ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ಪೊಲೀಸರು ಜಾಗೃತ ಸ್ಥಿತಿಯಲ್ಲಿದ್ದರು. ಈ ಮಧ್ಯೆ, ‘ಫಳ್ನೀರ್ನಲ್ಲಿ ಬಾಂಬ್ ಇದೆ’ ಎಂಬ ಕರೆ ಬಂದಾಗ ಪೊಲೀಸರಿಗೆ ಸಹಜವಾಗಿ ಆತಂಕ ಹುಟ್ಟಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ತಪಾಸಣೆ ನಡೆಸಿದರು.