ಉಳ್ಳಾಲ, ಆ 11 (DaijiworldNews/SM): ಉಳ್ಳಾಲ ನಗರಸಭೆಯ ಕೌನ್ಸಿಲರೊಬ್ಬರ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿದ ಘಟನೆ ನಡೆದಿದೆ. ನಗರಸಭೆಯ ಕೌನ್ಸಿಲರ್ ಮುಸ್ತಾಕ್ ಪಟ್ಲ ಎಂಬವರು ಹಲ್ಲೆಗೊಳಗಾದವರು.
ಜಲೀಲ್ ಎಂಬಾತ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ವಿಪರೀತ ಮಳೆಯಿಂದ ಕಲ್ಲಾಪುವಿನಲ್ಲಿ ನೀರು ತುಂಬಿದ ಹಿನ್ನೆಲೆಯಲ್ಲಿ ಉಳ್ಳಾಲ ನಗರಸಭೆಯ ಪೌರ ಕಾರ್ಮಿಕರ ಜತೆ ಸ್ವಚ್ಛತೆಯ ಕಾರ್ಯವನ್ನು ಬಬ್ಬುಕಟ್ಟೆ ವಾರ್ಡ್ ಕೌನ್ಸಿಲರ್ ಮುಸ್ತಾಕ್ ನಿರ್ವಹಿಸುತ್ತಿದ್ದರು.
ಈ ಸಂದರ್ಭ ಸಾಂಕ್ರಾಮಿಕ ರೋಗ ಬಾರದಂತೆ ಕ್ರಿಮಿನಾಶಕ ಔಷಧಿ ಸಿಂಪಡಿಸುತ್ತಿದ್ದರು. ಈ ವೇಳೆ ಮಗುವಿನ ಮೇಲೆ ಔಷಧಿ ಬಿದ್ದಿದೆ ಎಂಬ ಕ್ಷುಲ್ಲಕ ಕಾರಣ ಮುಂದಿಟ್ಟುಕೊಂಡು ಆರೋಪಿ ಜಲೀಲ್ ಎಂಬಾತ ಮುಸ್ತಾಕ್ ಅವರನ್ನು ತರಾಟೆಗೆ ತೆಗೆದುಕೊಂಡು ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಹಲ್ಲೆಗೊಳಗಾದ ಕೌನ್ಸಿಲರ್ ಮುಸ್ತಾಕ್ ಪಟ್ಲ ಅವರನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಾಗಿದೆ.