ಮಂಗಳೂರು, ಆ 12 (Daijiworld News/MSP): ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಹಾಗೂ ಮಳೆ ಹಾನಿ ಪರಿಶೀಲನೆಗಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು (ಆ. 12 ) ಇಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುಮಾರು 11.30 ಕ್ಕೆ ಬಂದಿಳಿಯಲಿದ್ದಾರೆ.
ಆ ಬಳಿಕ ರಸ್ತೆ ಮಾರ್ಗವಾಗಿ ಬೆಳ್ತಂಗಡಿಗೆ ತೆರಳಲಿದ್ದಾರೆ. ಮಧ್ಯಾಹ್ನ 1 ರಿಂದ 2ಗಂಟೆಯ ತನಕ ಬೆಳ್ತಂಗಡಿ ಸುತ್ತಮುತ್ತದ ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ನಡೆಸಲಿದ್ದಾರೆ.
ಮಧ್ಯಾಹ್ನ 2. 30ರಿಂದ ಧರ್ಮಸ್ಥಳದಲ್ಲಿ ನೆರೆ ಹಾವಳಿಯ ಪರಿಹಾರ ಕ್ರಮಗಳ ಕುರಿತಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಸಭೆ ನಡೆಸಲಿದ್ದಾರೆ. ನಂತರ ಬಂಟ್ವಾಳಕ್ಕೆ ಆಗಮಿಸಿ ಅಲ್ಲಿಯೂ ನೆರೆ ಪೀಡಿದ ಪ್ರದೇಶಕ್ಕೆ ತೆರಳಿ ವೀಕ್ಷಣೆ ನಡೆಸಲಿದ್ದಾರೆ. ಸಂಜೆ 5. 15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಹಿಂತಿರುಗಿ ಮೈಸೂರಿಗೆ ತೆರಳಲಿದ್ದಾರೆ.