ಮಂಗಳೂರು, ಆ 12 (Daijiworld News/SM): ಅದ್ಯಪಾಡಿ ನೆರೆ ಬಾಧಿತ ಪ್ರದೇಶಕ್ಕೆ ತಾ. ಪಂ. ಕಾರ್ಯನಿರ್ವಹಣಾದಿಕಾರಿ, ಗ್ರಾಮ ಲೆಕ್ಕಾಧಿಕಾರಿ, ಆರೋಗ್ಯ ಇಲಾಖೆಯ ಸಿಬ್ಬಂದಿ, ಜಿಲ್ಲಾ ಪಂಚಾಯತ್ ಸದಸ್ಯರು, ಪಂಚಾಯತ್ ಅಧ್ಯಕ್ಷರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅದ್ಯಪಾಡಿ ಮುಗೆರು ಕುದುರು ಪ್ರದೇಶದಿಂದ ಬೆಳಗ್ಗೆಯಿಂದ ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ. ಈ ಕಾರ್ಯ ಈಗಲೂ ಮುಂದುವರೆದಿದೆ. ಗ್ರಾಮ ಲೆಕ್ಕಾಧಿಕಾರಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಫಲ್ಗುಣಿ ರೈತರ ಹಿತರಕ್ಷಣಾ ವೇದಿಕೆಯ ಸದಸ್ಯರು ಪರಿಹಾರ ಕಾರ್ಯದಲ್ಲಿ ಕೈಜೋಡಿಸುತ್ತಿದ್ದಾರೆ.
ಇನ್ನು ಪರಿಸ್ಥಿತಿ ಅವಲೋಕಿಸಲು ಬಂದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ವಾಸ್ತವ ಸಂಗತಿಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ವಿವರ ನೀಡಲಿದ್ದಾರೆ. ಬಳಿಕ ಜಿಲ್ಲಾಧಿಕಾರಿಗಳು ಮುಂದಿನ ಕ್ರಮಕೈಗೊಳ್ಳಲಿದ್ದಾರೆ.