ಕಾಸರಗೋಡು, ಆ 13 (Daijiworld News/MSP): ವಸ್ತ್ರ ಮಳಿಗೆಯೊಂದರಲ್ಲಿ ಅಗ್ನಿ ಆಕಸ್ಮಿಕ ಉಂಟಾಗಿ ಲಕ್ಷಾಂತರ ಮೌಲ್ಯದ ಬಟ್ಟೆಗಳು ಬೆಂಕಿಗೆ ಆಹುತಿಯಾದ ಘಟನೆ ಆ. 13 ರ ಮಂಗಳವಾರ ಬದಿಯಡ್ಕ ಪೇಟೆಯಲ್ಲಿ ನಡೆದಿದೆ.
ಘಟನೆಯಿಂದ ಮಳಿಗೆಯಲ್ಲಿದ್ದ ವಸ್ತ್ರ ಹಾಗೂ ಇತರ ವಸ್ತುಗಳು ಅಗ್ನಿಗಾಹುತಿಯಾಗಿದ್ದು , ಅಂಗಡಿ ನೌಕರರು ಹಾಗೂ ಸ್ಥಳೀಯರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಉತ್ತರ ಪ್ರದೇಶ ಕುಮಾರ್ ಎಂಬವರ ಮಾಲಕತ್ವದ ಮಳಿಗೆಯಲ್ಲಿ ಅಗ್ನಿ ಅನಾಹುತ ಉಂಟಾಗಿದ್ದು, ಭಾರೀ ಪ್ರಮಾಣದ ಹಾನಿ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ.