ಕಾಸರಗೋಡು, ಆ 14 (Daijiworld News/SM): ನಿರ್ಮಾಣ ಹಂತದ ಮನೆಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿರುವ ಘಟನೆಯೊಂದು ನಗರದ ಆದೂರು ಎಂಬಲ್ಲಿ ನಡೆದಿದೆ.
ಕೇರಳ ಮೂಲದ ಮಲಪ್ಪುರಂ ನಿವಾಸಿ ಲತೀಫ್(44) ಎಂಬವರು ಶವವಾಗಿ ಪತ್ತೆಯಾದವರು. ಇವರ ಸಾವಿನ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದು, ಕೊಲೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.
ಇನ್ನು ಮಲಪುರಂ ನಿವಾಸಿ ಆದೂರಿನಲ್ಲಿ ಶವವಾಗಿ ಪತ್ತೆಯಾಗಿರುವ ಕಾರಣ ಸಂಶಯ ಹೆಚ್ಚಾಗಲು ಕಾರಣ ಎನ್ನಲಾಗಿದೆ. ಈ ಬಗ್ಗೆ ಆದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.