ಮಂಗಳೂರು,ಆ 18 (Daijiworld News/RD): ಫೋನ್ ಕದ್ದಾಲಿಕೆ ಪ್ರಕರಣದ ಕುರಿತು ಸಿಬಿಐ ತನಿಖೆ ಅಥವಾ ಟ್ರಂಪ್ ಗೆ ಹೇಳಿ ಅಂತರಾಷ್ಟ್ರೀಯ ಮಟ್ಟದಲ್ಲಿ ಬೇಕಾದರೂ ತನಿಖೆ ನಡೆಸಲಿ, ನಾನು ತನಿಖೆಗೆ ಸಿದ್ಧ, ನಾನು ಯಾವುದಕ್ಕೂ ಹೆದರುವುದಿಲ್ಲ ಎಂದು ಕುಮಾರಸ್ವಾಮಿ ಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ್ದಾರೆ.
ಧರ್ಮಸ್ಥಳ ಹಾಗೂ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಈ ವೇಳೆ ಮಾಧ್ಯಮದ ಜೊತೆ ಮಾತನಾಡಿ, ಯುಡಿಯೂರಪ್ಪ ಪೋನ್ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿದ್ದು, ಈ ಬಗ್ಗೆ ತಮ್ಮ ನಿಲುವನ್ನು ತಿಳಿಸಿದರು. ರಾಜ್ಯ ಸರ್ಕಾರ ಯಾವ ತನಿಖೆ ನಡೆಸುತ್ತದೆ ಆ ತನಿಖೆಗೆ ನಾನು ಸಿದ್ಧ. ಯಾಕೆಂದರೆ ನಾನು ತಪ್ಪು ಮಾಡಿಲ್ಲ ಹಾಗಾಗಿ ಅದರಲ್ಲಿ ಸಾಬೀತುಪಡಿಸುವ ಅವಶ್ಯಕತೆ. ಸುಮ್ಮನೆ ಇಲ್ಲದ ಸಲ್ಲದ ಆರೋಪ ಹೊರಿಸಿ ನನ್ನ ವ್ಯಕ್ತಿತ್ವವನ್ನು ಹಾಳು ಮಾಡುತ್ತಿದ್ದಾರೆ. ಈ ವಿಚಾರವನ್ನು ಬೇಕಾದರೆ ಟ್ರಂಪ್ಗೆ ಹೇಳಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಕಾದರೂ ತನಿಖೆ ನಡೆಸಲಿ, ನಾನು ಈ ಬಗ್ಗೆ ಚಿಂತೆನಡೆಸಲ್ಲ ಎಂದು ವ್ಯಂಗ್ಯವಾಡಿದರು.
ಪ್ರವಾಹದಿಂದದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಾನಿ ಉಂಟಾಗಿದ್ದು, ಈಗಾಗಲೇ ಸಂತೃಸ್ತರನ್ನು ಭೇಟಿ ಮಾಡಿದ್ದೇನೆ. ಈಗಾಗಲೆ ನಮ್ಮ ಪಕ್ಷದಿಂದ ಪರಿಹಾರ ಕಲ್ಪಸಿಕೊಡುತ್ತೆವೆ. ಮೈತ್ರಿ ಸರಕಾರ ಆಡಳಿತದ ಅವಧಿಯಲ್ಲಿ ರಾಜ್ಯದ ಜನತೆಗೆ ಜನಪರ ಯೋಜನೆಗಳನ್ನು ನೀಡಿದ್ದೇವೆ. ಆದರೆ ಇಂದಿನ ಸರ್ಕಾರ ನೆರೆ ಸಂತೃಸ್ಥರಿಗೆ ಪರಿಹಾರ ನಿಧಿ ನೀಡುವಲ್ಲಿ ಹಿಂದೆ ಮುಂದೆ ನೋಡುತ್ತಿದೆ. ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ಬಿಜೆಪಿ ಸರಕಾರದಲ್ಲಿದ್ದ ಸಂದರ್ಭದಲ್ಲಿ ಕೇಂದ್ರದಿಂದ 1ಸಾವಿರ ಕೋಟಿ ಬಿಡುಗಡೆ ಮಾಡಲಾಗಿತ್ತು. ಆದರೆ ಈಗ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿ ಎ ಸರಕಾರ ಇದ್ದರೂ ಪಿಹಾರ ಕ್ರಮ ಕೈಗೊಳ್ಳಲು ವಿಳಂಬ ಒಡ್ಡುತ್ತಿದೆ.