ಉಡುಪಿ, ಆ 21 (DaijiworldNews/SM): ಮನೆಗೆ ನುಗ್ಗಿ ನಗದು ಹಾಗೂ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಾಳ ಗ್ರಾಮದ ಅಹಮದ್ ಬಾವಾ ಎಂಬವರ ಮಗ ಮಹಮ್ಮದ್ ಅಲಿ(45) ಬಂಧಿತ ಆರೋಪಿಯಾಗಿದ್ದಾನೆ.
ಬಂಧಿತನಿಂದ ಸುಮಾರು 38.75 ಗ್ರಾಂ ತೂಕದ ಚಿನ್ನಾಭರಣ, 3,00,550 ರೂಪಾಯಿ ನಗದು ಹಾಗೂ ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾ, ಕಳವು ಮಾಡಿದ ಹಣದಿಂದ ಖರೀದಿಸಿದ ಓಮಿನಿ ಕಾರು
ಸಹಿತ ಒಟ್ಟು 5,45,550 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಬ್ರಹ್ಮಾವರ ಠಾಣಾ ಸರಹದ್ದಿನ ಹೆಗ್ಗುಂಜೆ ಗ್ರಾಮದ ಮೈರ್ಕೊಮೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ನಟರಾಜ್ ಹಂಜಾರ್ರವರ ಮನೆಯಲ್ಲಿನ ನಗದು ಹಾಗೂ ಚಿನ್ನಾಭರಣವನ್ನು ಕಳವು ಮಾಡಲಾಗಿತ್ತು. ಪ್ರಕರಣವನ್ನು ಬೆನ್ನತ್ತಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬ್ರಹ್ಮಾವರ ವೃತ್ತದ ಸಿ.ಪಿ.ಐ. ಶ್ರೀಕಾಂತ್ ರವರ ನೇತೃತ್ವದ ತಂಡದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಯ ಪಿ.ಎಸ್.ಐ. ರಾಘವೇಂದ್ರ ಸಿ, ಎಎಸ್ಐ ನಾರಾಯಣ, ಸಿಬ್ಬಂದಿಯವರಾದ ವೆಂಕಟ್ರಮಣ ದೇವಾಡಿಗ, ಪ್ರವೀಣ್ ಶೆಟ್ಟಿಗಾರ್, ರಾಘವೇಂದ್ರ ಕಾರ್ಕಡ, ಗಣೇಶ್ ದೇವಾಡಿಗ, ದಿಲೀಪ್ ಕುಮಾರ್, ಹರೀಶ್, ಪ್ರಸಾದ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.