ಮಂಗಳೂರು, ಆ 25 (DaijiworldNews/SM): ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಅವರು ಆಗಸ್ಟ್ 29 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಮಧ್ಯಾಹ್ನ 12.20 ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಆ. 30 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ಅಖಿಲ ಭಾರತ ಕ್ಯಾಥೊಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಇನ್ನು ಅವರು ಮಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲಾ ರೀತಿಯ ಭದ್ರತೆಯನ್ನು ಕೈಗೊಳ್ಳಲಾಗಿದೆ. ಪೊಲೀಸ್ ಇಲಾಖೆ ಈಗಾಗಲೇ ಸಂಚಾರಕ್ಕೆ ಎಲ್ಲಾ ರೀತಿಯ ಸಿದ್ದತೆಗಳನ್ನು ಕೈಗೊಂಡಿದೆ ಎಂದರು. ಕಾರ್ಯಕ್ರಮವನ್ನು ಸುಸೂತ್ರವಾಗಿ ನೆರವೇರಿಸಲು ಎಲ್ಲಾ ಸಿದ್ಧತೆ ನಡೆಸಲಾಗಿದೆ ಎಂದರು.
ಆಗಸ್ಟ್ 31 ರಂದು ಅವರು ಮಂಗಳೂರಿನಿಂದ ನಿರ್ಗಮಿಸಲಿದ್ದಾರೆ ಎಂದರು. ಇನ್ನು ಇದಕ್ಕೂ ಮುನ್ನ ದಲಾಯಿಲಾಮ ಆಗಮನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ಧತಾ ಸಭೆ ನಡೆಸಲಾಯಿತು. ಭದ್ರತೆ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.