ಪಣಂಬೂರು,ಆ 31 (Daijiworld News/RD): ಅಕ್ರಮ ಗೋ ಸಾಗಾಟ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈತ ಕೋಟೇಶ್ವರ ಸಿಂಡಿಕೇಟ್ ಬ್ಯಾಂಕ್ ಬಳಿಯ ಮಹಮ್ಮದ್ ಹನೀಫ್ ಯಾನೆ ಗಂಧ ಹನೀಫ್ (45) ಎಂದು ಗುರುತಿಸಲಾಗಿದೆ. ಈತನನ್ನು ಪಣಂಬೂರು ಉಪವಿಭಾಗ ಎಸಿಪಿ ಶ್ರೀನಿವಾಸ ಗೌಡ ನೇತೃತ್ವದ ರೌಡಿ ನಿಗ್ರಹದಳದ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ದಕ್ಷಿಣ ಕನ್ನಡ, ಮಂಗಳೂರು ನಗರ, ಉಡುಪಿ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳು ಸಹಿತ ವಿವಿಧೆಡೆ ಅಕ್ರಮ ಗೋ ಸಾಗಾಟ ಪ್ರಕರಣಗಳಲ್ಲಿಯೂ ಈತ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.