ಉಳ್ಳಾಲ,ಸೆ 2 (Daijiworld News/RD): ಸಾಮಾಜಿಕ ಜಲಾತಾಣಗಳಲ್ಲಿ ಕೋಮು ದ್ವೇಷ ಬಿತ್ತುವಂತಹ ಸಂದೇಶವನ್ನು ರವಾನಿಸಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಝಾಕೀರ್ ಆಗಿದ್ದು,ಈತ ಉಳ್ಳಾಲದ ನಿವಾಸಿ, ಈತ ಸಾಮಾಜಿಕ ಜಾಲಾತಾಣ, ವ್ಯಾಟ್ಸ ಆಪ್ ನಲ್ಲಿ ಕೋಮು ದ್ವೇಷ ಹರಡುವ ಸಂದೇಶ ರವಾನಿಸುತ್ತಿದ್ದ. ಈ ಬಗ್ಗೆ ಪೊಲೀಸರು ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾಗ, ಆತನ ಮೊಬೈಲ್ ಪೋನ್ ವಶಕ್ಕೆ ಪಡೆದು ಪರಿಶೀಲಿಸಿದರು. ಈ ವೇಳೆ ಕೋಮು ದ್ವೇಷ ಬಿತ್ತುವ ಸಂದೇಶಗಳನ್ನು ಕಳುಹಿಸಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಈತನ ಮೇಲೆ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಪಿ. ಎಸ್. ಹರ್ಷ, ಈ ರೀತಿ ಸಾಮಾಜಿಕ ಜಾಲಾತಾಣದಲ್ಲಿ ಕೋಮು ದ್ವೇಷ ಬಿತ್ತುವ ಘಟನೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಈ ರೀತಿಯ ಘಟನೆ ನಡೆದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.