ಉಳ್ಳಾಲ,ಸೆ 2 (Daijiworld News/RD): ಕೋಮು ಪ್ರಚೋದಿತ ಸಂದೇಶವನ್ನು ವ್ಯಾಟ್ಸ ಆಪ್ ನಲ್ಲಿ ರವಾನಿಸುತ್ತಿದ್ದ ಉಳ್ಳಾಲ ನಿವಾಸಿ, ಜೆಡಿಎಸ್ ಬೆಂಬಲಿತ ಮಾಜಿ ಕೌನ್ಸಿಲರ್ ಝಾಕಿರ್ ಹುಸೈನ್ ಅವರನ್ನು ನಗರದ ಪೊಲೀಸರು ನಿನ್ನೆ ಬಂಧಿಸಿದ್ದು, ಇದನ್ನು ವಿರೋಧಿಸಿ ಪಿಎಫ್ ಐ ಸಂಘಟನೆ ಉಳ್ಳಾಲ ಠಾಣೆಯೆದುರು ಪ್ರತಿಭಟನೆ ನಡೆಸಿದ್ದಾರೆ.
ಪೊಲೀಸರು ಪ್ರತಿಭಟನೆಯ ಅನುಮತಿ ನಿರಾಕರಿಸಿದ್ದಾರೆ. ಹೀಗಾಗಿ ಪ್ರತಿಭಟನೆ ನಡೆಸಿಯೇ ಸಿದ್ಧ ಎಂದು ಪಟ್ಟು ಹಿಡಿದ ಪಿಎಫ್ ಐ ಸಂಘಟನೆಯ ಕಾರ್ಯಕರ್ತರು, ಹೀಗಾಗಿ ಠಾಣೆಯೆದುರು ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಈತ ಸಾಮಾಜಿಕ ಜಾಲಾತಾಣ ವ್ಯಾಟ್ಸ ಆಪ್ ನಲ್ಲಿ ಕೋಮು ದ್ವೇಷ ಹರಡುವ ಸಂದೇಶ ರವಾನಿಸುತ್ತಿದ್ದ. ಈ ಬಗ್ಗೆ ಪೊಲೀಸರು ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾಗ, ಆತನ ಮೊಬೈಲ್ ಪೋನ್ ವಶಕ್ಕೆ ಪಡೆದು ಪರಿಶೀಲಿಸಿದರು. ಈ ವೇಳೆ ಕೋಮು ದ್ವೇಷ ಬಿತ್ತುವ ಸಂದೇಶಗಳನ್ನು ಕಳುಹಿಸಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಈತನ ಮೇಲೆ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು