ಕುಂದಾಪುರ,ಸೆ 06 (Daijiworld News/RD): ಅಪ್ರಾಪ್ತ ಅನಾಥ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಗಂಭೀರ ಆರೋಪದ ಮೇಲೆ ಕುಂದಾಪುರದ ಕೆದೂರಿನಲ್ಲಿರುವ ಸ್ಪೂರ್ತಿಧಾಮದ ಸ್ವಯಂಘೋಷಿತ ಕಾರ್ಯದರ್ಶಿ ಹಾಗೂ ರಾಜ್ಯ ಜೋಗಿ ಸಂಘಟನೆಯ ಅಧ್ಯಕ್ಷ ಕೇಶವ ಕೋಟೇಶ್ವರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಉಡುಪಿ ವಿಶೇಷ ನ್ಯಾಯಾಲಯವು ವಜಾಗೊಳಿಸಿದೆ.
ಸ್ಪೂರ್ತಿಧಾಮದಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸಂಬಂಧ ಈತನ ಮೇಲೆ ಎರಡು ಪ್ರಕರಣಗಳು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಕಳೆದ ಮಾರ್ಚ್ ನಲ್ಲಿ ಕೇಶವ ಕೊಟೇಶ್ವರ ಮತ್ತು ನೂಜಿ ನಿವಾಸಿ ಹನುಮಂತ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನ ವಿಧಿಸಿದ್ದರು.
ಕೇಶವ ಪರ ವಕೀಲರು ಹೈಕೋರ್ಟಿಗೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರೂ ವಿಚಾರಣೆ ಮೊದಲೇ ವಾಪಸ್ ಪಡೆದುಕೊಳ್ಳಲಾಗಿತ್ತು. ಪ್ರಾಸಿಕ್ಯೂಶನ್ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಕಾಶ್ಚಂದ್ರ ಶೆಟ್ಟಿ ಬೇಳೂರು ವಾದಿಸಿದ್ದರು.