ಉಡುಪಿ,ಸೆ 06 (Daijiworld News/RD): ಕಾರೊಂದು ಡಿವೈಡರ್ ಗೆ ನುಗ್ಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಕಾರು ಚಾಲಕ ಗಾಯಗೊಂಡ ಘಟನೆ ಸೆ.6 ರ ಶುಕ್ರವಾರ ಮುಂಜಾನೆ ಕುಂದಾಪುರ - ಉಡುಪಿ ರಾಷ್ಟ್ರೀಯ ಹೆದ್ದಾರಿಯ ಶಾರದಾ ಇಂಟರ್ ನ್ಯಾಷನಲ್ ಹೋಟೇಲ್ ಬಳಿ ಸಂಭವಿಸಿದೆ.
ಕಾರು ಚಾಲಕನನ್ನು ಕಲ್ಯಾಣಪುರದ ಆನಂದ್ ಪದ್ಮನಾಭನ್ ಎಂದು ಗುರುತಿಸಲಾಗಿದೆ. ಸಂತೇಕಟ್ಟೆಯಿಂದ ಉಡುಪಿಯ ಕಡೆಗೆ ಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತಗೆ ಕಾರು ಸಂಪೂರ್ಣ ಹಾನಿಯಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚಾಲಕನನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಡುಪಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣದ ದಾಖಲಿಸಿಕೊಂಡಿದ್ದಾರೆ.