ನೆಲ್ಯಾಡಿ, ಸೆ.06(Daijiworld News/SS): ಶಿರಡಿ ಘಾಟ್'ನಸಮೀಪದ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ 20 ಅಡಿ ಎತ್ತರದಿಂದ ಬೃಹತ್ ಬಂಡೆ ಉರುಳಿ ಬಿದ್ದಿದ್ದು, ಆತಂಕ ಮನೆ ಮಾಡಿದೆ.
ಮಾರನಹಳ್ಳಿ ಸಮೀಪ ಗುಡ್ಡ ಕುಸಿತ ಸಂಭವಿಸಿದ್ದು, ಐದಾರು ಬಂಡೆ ಕಲ್ಲುಗಳು ರಸ್ತೆ ಬದಿಗೆ ಉರುಳಿ ಬಿದ್ದಿವೆ. ಇನ್ನು ಒಂದು ಬಂಡೆ ಕುಸಿದು ಬೀಳುವ ಹಂತದಲ್ಲಿದ್ದು, ಅಪಾಯಕಾರಿಯಾಗಿ ಗೋಚರಿಸಿದೆ. ಮಂಗಳೂರು-ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಶಿರಾಡಿಘಾಟ್ ರಸ್ತೆಯಾದ ಈ ಮಾರ್ಗದಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳ ಸಂಚಾರ ನಡೆಸುತ್ತವೆ.
ಹಾಸನ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿರಾಡಿಘಾಟ್ ರಸ್ತೆಯಲ್ಲಿ ಅಲ್ಲಲ್ಲಿ ಭೂ ಕುಸಿತ ಉಂಟಾಗಿದೆ. ಈ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇದರಿಂದಾಗಿ ಗುಡ್ಡ ಕುಸಿತ ಸಂಭವಿಸಿದೆ ಎನ್ನಲಾಗಿದೆ.
ಗುಡ್ಡ ಕುಸಿತದಿಂದ ಶಿರಾಡಿ ಘಾಟ್'ನಲ್ಲಿ ಸಂಚಾರಕ್ಕೆ ಯಾವುದೇ ತೊಂದರೆ ಉಂಟಾಗಿಲ್ಲ. ಆದರೆ ಅಪಾಯಕಾರಿ ಸ್ಥಿತಿಯಲ್ಲಿರುವ ಬಂಡೆ ಉರುಳಿ ಬಿದ್ದರೆ ಅನಾಹುತ ಉಂಟಾಗುವ ಸಾಧ್ಯತೆ ಇದೆ.