ಉಪ್ಪಿನಂಗಡಿ, ಸೆ.07(Daijiworld News/SS): ಲಕ್ಷಾಂತರ ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಭಗವಾನ್ ಸಿಂಗ್ ( 32 ವರ್ಷ), ಸುನೀಲ್ (27 ವರ್ಷ), ಜಮೀಲ್ (60 ವರ್ಷ) ಬಂಧಿತ ಆರೋಪಿಗಳು.
ಈಗಾಗಲೇ ಈ ಮೂವರನ್ನು ದಸ್ತಗಿರಿ ಮಾಡಲಾಗಿದ್ದು, ಬಂಧಿತ ಆರೋಪಿಗಳಿಂದ ಒಟ್ಟು ರೂ. 9 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.