ಉಡುಪಿ,ಸೆ 12 (Daijiworld News/RD): ಮೋಟಾರು ಕಾಯ್ದೆಯನ್ನು ಖಂಡಿಸಿ, ಬಿಜೆಪಿ ಮೊಸಳೆ ಕಣ್ಣೀರಿನ ನಾಟಕವಾಡುತ್ತಿದೆ, ಇದನ್ನು ಯಾರು ನಂಬಬೇಡಿ, ಹೀಗೆ ಮುಂದುವರಿದರೆ ಸಾಮಾನ್ಯ ಜನರ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಲಿದೆ ಕೇಂದ್ರ ಸರಕಾರದ ನೀತಿಯನ್ನು ವಿರೋಧಿಸಿ ಇನ್ನಷ್ಟು ಉಗ್ರವಾಗಿ ಪ್ರತಿಭಟನೆ ಮಾಡುತ್ತೇವೆ ಎಂದು ಮಾಜಿ ಶಾಸಕ ವಿನಯಕುಮಾರ್ ಸೊರಕೆ ಎಂದು ಎಚ್ಚರಿಕೆ ನೀಡಿದರು.
ರಾಜ್ಯದ ಬಗ್ಗೆ ಕೇಂದ್ರದ ಈ ನಿರ್ಲಕ್ಷ್ಯ ಧೋರಣೆ ಖಂಡಿಸಿ ಹಾಗೂ ಕೇಂದ್ರದ ಜನ ವಿರೋಧಿ ನೀತಿಯಾದ ಮೋಟಾರು ವಾಹನ ಕಾಯಿದೆಯ ತಿದ್ದುಪಡಿ ವಿರುದ್ದ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಜ್ಜರಕಾಡಿನಲ್ಲಿರುವ ಹುತಾತ್ಮರ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಅವರು ಮಾತನಾಡಿದರು.
ರಾಜ್ಯದಲ್ಲಿ ಭೀಕರ ಪ್ರವಾಹದಿಂದಾಗಿ 22 ಜಿಲ್ಲೆಗಳಲ್ಲಿ ಅತಿವೃಷ್ಠಿಯಾದರೂ ಕೇಂದ್ರ ಸರಕಾರ ರಾಜ್ಯಕ್ಕೆ ಬಿಡಿಗಾಸೂ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ದೇಶದಲ್ಲಿ ವಿರೋಧ ಪಕ್ಷ ಇರಬಾರದು ಎಂದು ಹೇಳುತ್ತಿರುವ ಬಿಜೆಪಿ ಕಾಂಗ್ರೆಸ್ ಮೇಲೆ ಶಕ್ತಿ ಪ್ರಯೋಗ ನಡೆಸಲಾಗುತ್ತಿದೆ ಎಂದರು. ಐಟಿ, ಇಡಿ ದಾಳಿ ನಡೆಸುವ ಮೂಲಕ ನಮ್ಮ ನಾಯಕರನ್ನ ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ. ಮೋಟಾರು ಕಾಯ್ದೆಯನ್ನು ಖಂಡಿಸಿ, ಬಿಜೆಪಿ ಮೊಸಳೆ ಕಣ್ಣೀರನ ನಾಟಕವಾಡುತ್ತಿದೆ, ಇದನ್ನು ಯಾರು ನಂಬಬಾರದು. ಹೀಗೆ ಮುಂದುವರಿದರೆ ಸಾಮಾನ್ಯ ಜನರ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುತ್ತದೆ, ಕೇಂದ್ರ ಸರಕಾರದ ನೀತಿಯನ್ನು ವಿರೋಧಿಸಿ ಇನ್ನಷ್ಟು ಉಗ್ರವಾಗಿ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಉಡುಪಿ ಅಧ್ಯಕ್ಷ ರಾದ ಅಶೋಕ್ ಕುಮಾರ್, ಯುಆರ್ ಸಭಾಪತಿ, ಪ್ರಖ್ಯಾತ್ ಶೆಟ್ಟಿ, ವಿಶ್ವಾಸ್ ಅಮೀನ್, ಗೀತಾ ವಾಗ್ಳೆ, ಸುನೀತಾ ಹೆಬ್ಬಾರ್, ವೆರೋನಿಕಾ ಕರ್ನೆಲಿಯೋ ಮೊದಲಾದವರು ಪಾಲ್ಗೊಂಡಿದ್ದರು.