ಮಂಗಳೂರು,ಸೆ 12 (Daijiworld News/RD): ಭರ್ಜರಿ ಪ್ರದರ್ಶನದೊಂದಿಗೆ ಕೋಸ್ಟಲ್ ವುಡ್ ನಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಇತ್ತೀಚೆಗೆ ತೆರೆಕಂಡ ತುಳು ಚಿತ್ರ ‘ಗಿರಿಗಿಟ್’ ಗೆ ಸಂಕಷ್ಟ ಎದುರಾಗಿದೆ. ‘ಗಿರಿಗಿಟ್’ ಚಿತ್ರಕ್ಕೆ ಮಂಗಳೂರು ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಚಿತ್ರದಲ್ಲಿ ನ್ಯಾಯಾಂಗ ನಿಂದನೆ ಮತ್ತು ವಕೀಲರಿಗೆ ಅವಹೇಳನ ಮಾಡಿದ್ದಾರೆ ಎಂದು ವಕೀಲರ ಸಂಘ ಆಕ್ರೋಶ ವ್ಯಕ್ತಪಡಿಸಿ. ಅಲ್ಲದೆ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ಬಗ್ಗೆ ಪರಿಶೀಲಿಸಿದ ನ್ಯಾಯಾಲಯವು ಚಿತ್ರವನ್ನು ತಕ್ಷಣದಿಂದ ತಡೆಹಿಡಿಯಬೇಕು ಎಂದು ಮಂಗಳೂರು ಕಿರಿಯ ಪ್ರಧಾನ ನ್ಯಾಯಾಧೀಶರಾದ ಹರೀಶ್ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ. ಈ ಬಗ್ಗೆ ವಕೀಲರ ಸಂಘದ ಪರ ಹಿರಿಯ ನ್ಯಾಯಾವಾದಿ ಎಂ.ಪಿ.ಶೆಣೈ ವಾದ ಮಂಡಿಸಿದ್ದರು.
ಚಿತ್ರದಲ್ಲಿ ನ್ಯಾಯಾಲಯಕ್ಕೆ ಸಂಬಂಧಪಟ್ಟ ದೃಶ್ಯವಿದ್ದು ಇದರಲ್ಲಿ ನಟ ಅರವಿಂದ ಬೋಳಾರ್ ವಕೀಲರ ಪಾತ್ರ ನಿರ್ವಹಿಸಿದ್ದು, ಅದರಲ್ಲಿ ಐಪಿಸಿ ಸೆಕ್ಷನ್, ನ್ಯಾಯಧೀಶರನ್ನು ಹಾಗೂ ನ್ಯಾಯಾಲವನ್ನು ಅಣಕಿಸಿರುವ ಬಗ್ಗೆ ಮತ್ತು ವಕೀಲರ ವೃತ್ತಿಯನ್ನು ಹಾಸ್ಯಮಯವಾಗಿ ತೋರಿಸಲಾಗಿತ್ತು. ಚಿತ್ರವನ್ನು ನಟ ರೂಪೇಶ್ ಶೆಟ್ಟಿ ನಿರ್ದೇಶಿಸಿದ್ದಾರೆ.