ಪುತ್ತೂರು, ಸೆ 12 (DaijiworldNews/SM): ನೆರೆ ಸಂತ್ರಸ್ತ ರಾಜ್ಯದ ವಿವಿಧ ಜಿಲ್ಲೆಗಳಿಗೆ ಪರಿಹಾರ ಬಿಡುಗಡೆಗೊಳಿಸದ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯಾಧ್ಯಂತ ಪ್ರತಿಭಟನೆ ನಡೆಸುತ್ತಿದೆ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್ ಪುತ್ತೂರು, ವಿಟ್ಲ ಹಾಗೂ ಉಪ್ಪಿನಂಗಡಿ ವತಿಯಿಂದ ಪುತ್ತೂರಿನ ಗಾಂಧಿಕಟ್ಟೆಯ ಬಳಿ ಪ್ರತಿಭಟನೆ ನಡೆಯಿತು. ಕರ್ನಾಟಕದ ನೆರೆ ಸಂತ್ರಸ್ತರಿಗೆ ಹಣಕಾಸಿನ ನೆರವು ನೀಡದೇ ಕೆಂದ್ರ ಮತ್ತು ರಾಜ್ಯ ಸರಕಾರಗಳ ನಿರ್ಲಕ್ಷ ದೋರಣೆ ವಿರುದ್ದ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಪುತ್ತೂರು ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ ಇತ್ತಿಚೆಗೆ ಗಣೇಶೋತ್ಸವ ಸಂದರ್ಭ ನಡೆದ ಕಾರ್ತಿಕ್ ಕೊಲೆ ಪ್ರಕರಣದಲ್ಲಿ ಕೆಲವು ಅರೋಪಿಗಳನ್ನು ಪ್ರಕರಣದಿಂದ ಹೊರಗಿಡುವ ಪ್ರಯತ್ನ ನಡೆಯುತ್ತಿದೆ ಎಂಬ ಸಂಶಯವಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ ಅರೊಪಿಗಳನ್ನು ಬಂದಿಸಬೇಕು. ಕೆಂದ್ರ ಮತ್ತು ರಾಜ್ಯ ಸರಕಾರಗಳು ನೆರೆ ಸಂತ್ರಸ್ತರಿಗೆ ಸಿಗಬೇಕಾದ ನೇರವು ಶೀಘ್ರದಲ್ಲಿ ನೀಡಬೇಕು ಎಂದು ಒತ್ತಾಯಿಸಿದರು.
ಸತ್ಯಾಗ್ರಹದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಮಹಮ್ಮದ್ ಬಡಗನ್ನೂರು, ಕಾಂಗ್ರೆಸ್ ಜಿಲ್ಲಾ ಪ್ರಚಾರ ಉಸ್ತುವಾರಿ ಧನಂಜಯ ಅಡ್ಪಂಗಾಯ, ಕೆಪಿಸಿಸಿ ಸದಸ್ಯ ಎಂ ಬಿ ವಿಶ್ವನಾಥ ರೈ, ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಅಮಳ ರಾಮಚಂದ್ರ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.