ಕಾಸರಗೋಡು ಡಿ 28 : ಎಂಟನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಆರೋಪಿಗೆ ಹತ್ತು ವರ್ಷ ಕಠಿಣ ಸಜೆ ಮತ್ತು ೫೦ ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತೀರ್ಫು ನೀಡಿದೆ. ಎರಿಯಪ್ಪಾಡಿ ಕಂಡತ್ತಿಲ್ ನ ಅಬ್ದುಲ್ ರಹಮಾನ್ ಯಾನೆ ಅಂದುಞಿ ( 24) ಶಿಕ್ಷೆಗೊಳಗಾದ ಅಪರಾಧಿ .2013 ರ ಅಕ್ಟೋಬರ್ 1 ರಂದು
ಶಾಲೆ ಮುಗಿಸಿ ಮನೆಗೆ ಮರಳುತ್ತಿದ್ದ ಎಂಟನೇ ತರಗತಿ ವಿದ್ಯಾರ್ಥಿನಿಗೆ ಆಮಿಷ ಒಡ್ಡಿ ಆರೋಪಿ ತನ್ನ ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ವಿದ್ಯಾನಗರ ಠಾಣಾ ಪೊಲೀಸರಿಗೆ ದೂರು ನೀಡಲಾಗಿತ್ತು . ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪಿನಲ್ಲಿ ತಿಳಿಸಿದ್ದು , ದಂಡ ಮೊತ್ತವನ್ನು ಬಾಲಕಿಗೆ ನೀಡಬೇಕೆಂದು ಉಲ್ಲೇಖಿಸಿದೆ.