ಮಂಗಳೂರು, ಸೆ 16 (Daijiworld News/RD): ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ಯತ್ನಿಸಿದ ಪ್ರಯಾಣಿಕನಿಂದ 5.88 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಯನ್ನು ಸಿಐಎಸ್ಎಫ್ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.
ಹ್ಯಾರಿ ಸ್ಟೆಫನ್ ಆಯಂತೋನಿ ಡಿಸೋಜ ಬಂಧಿತ ಆರೋಪಿ. ಭಾನುವಾರ ಸಂಜೆ 7 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ದುಬೈಗೆ ತೆರಳಲು ಯತ್ನಿಸುತ್ತಿದ್ದ ಪ್ರಯಾಣಿಕನನ್ನು ಅಧಿಕಾರಿಗಳು ತಪಾಸಣೆ ನಡೆಸಿದರು.
ಈ ವೇಳೆ ಪ್ರಯಾಣಿಕನಿಂದ 2.93 ಲಕ್ಷ ರೂ. ಮೌಲ್ಯದ ದಿರ್ಹಮ್, 2.94 ರೂ. ಮೌಲ್ಯದ ಡಾಲರ್ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಂಡರು. ಇದರ ಒಟ್ಟು ಮೌಲ್ಯ 5.88 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈತನನ್ನು ಕಸ್ಟಮ್ಸ್ ಅಧಿಕಾರಿಗಳಿಗೆ ವಿಚಾರಣೆಗೆ ಒಳಪಡಿಸಿದ್ದಾರೆ.