ಮಂಗಳೂರು, ಡಿ 29: ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಸಾವಿರಾರು ಮಂದಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮತ್ತೇ ಕಣ್ಣೀರಿಟ್ಟ ಘಟನೆ ನಡೆದಿದೆ.
ನಗರದ ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರೋಡಿಯ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಅರಣ್ಯ ಸಚಿವ ಬಿ.ರಮಾನಾಥ ರೈ ಅವರು ಆಡಿದ ಆಶ್ಲೀಲ ಮಾತುಗಳನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ತನ್ನ ತಾಯಿ ಹಾಗೂ ತನ್ನ ವಿರುದ್ಧ ರೈ ಆಡಿದ ಮಾತನ್ನು ನೆನೆದು ವೇದಿಕೆಯಲ್ಲೇ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.
ನನ್ನ ತಾಯಿ ಚೆನ್ನಮ್ಮ. ನನ್ನ ಅಜ್ಜಿ ದೇಯಿ ಬೈದೆತಿ. ಕೋಟಿ ಚೆನ್ನಯರ ತಾಯಿಯೂ ದೇಯಿ ಬೈದೆತಿ. ರಮಾನಾಥ ರೈ ಹೇಳಿದಂತೆ ನನ್ನ ತಾಯಿ ಸೂಳೆ, ನಾನು ಸೂಳೆಯ ಮಗ ಎನ್ನುವ ಮಾತನ್ನು ನೆನೆದು ಸಾವಿರಾರು ಜನರ ಮುಂದೆ ಕಣ್ಣೀರು ಹಾಕಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದು, ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ಮೇಯರ್ ಕವಿತಾ ಸನಿಲ್ ಸೇರಿದಂತೆ ಬೇರೆ ಬೇರೆ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.