ಮಂಗಳೂರು, ಡಿ 30: ಕರಾವಳಿಯಲ್ಲಿ ಮತೀಯ ಗಲಭೆ ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಹತೋಟಿಗೆ ತರುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಇಬ್ಬರನ್ನು ಗಡಿಪಾರು ಮಾಡಿದೆ.
ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಪಟ್ಟಣದ ನಿವಾಸಿಗಳಾದ ಹಿಂದೂ ಜಾಗರಣ ವೇದಿಕೆ ಮುಖಂಡ ರತ್ನಾಕರ ಶೆಟ್ಟಿ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮುಖಂಡ ಖಲೀಲ್ ಎಂಬುವವರನ್ನು ಆರು ತಿಂಗಳ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು, ಮತೀಯ ಗಲಭೆಗೆ ಪ್ರಚೋದನೆ ನಿಡುತ್ತಿದ್ದ ಆರೋಪದ ಮೇಲೆ ಇವರನ್ನು ಗಡಿಪಾರು ಮಾಡಲು ಆದೇಶ ಹೊರಡಿಸಿದ್ದಾರೆ.ಇವರಿಬ್ಬರೂ ಬೇರೆ ಬೇರೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿದ್ದಾರೆ ಎಂದು ದಕ್ಷಿಣ ಕನ್ನಡ ಎಸ್ಪಿ ಸಿ.ಎಚ್.ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.