ಕಾಸರಗೋಡು, ಸೆ 23(DaijiworldNews/SM): ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪ ಸಮರಕ್ಕೆ ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭಗೊಂಡಿದ್ದು, ಮೊದಲ ದಿನ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ನಾಮಪತ್ರ ಸಲ್ಲಿಕೆಗೆ ಸೆ. 30 ಕೊನೆ ದಿನವಾಗಿದೆ. ಇನ್ನು ಏಳು ದಿನಗಳು ಬಾಕಿ ಉಳಿದುಕೊಂಡಿವೆ. ಯಾವ ಪಕ್ಷದಿಂದ ಯಾವ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂಬ ಕುತೂಹಲ ಮೂಡತೊಡಗಿದೆ.
ಸೋಮವಾರದಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗಿದ್ದು, ಅಕ್ಟೊಬರ್ 21ರಂದು ಉಪ ಸಮರಕ್ಕೆ ಅಖಾಡ ಸಿದ್ಧಪಡಿಸಲಾಗಿದೆ. ಇಂದಿನಿಂದ ಸೆ. 30ರ ತನಕ ನಾಮಪತ್ರ ಸ್ವೀಕರಿಸಲಾಗುವುದು. ಬೆಳಿಗ್ಗೆ 11 ರಿಂದ 3 ಗಂಟೆಯ ತನಕ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ.
ಜಿಲ್ಲಾಧಿಕಾರಿ ಕಚೇರಿಯ ಉಪ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸ್ವೀಕರಿಸಲಾಗುತ್ತಿದೆ. ಅಕ್ಟೊಬರ್ ಒಂದರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂತೆಗೆಯಲು ಅಕ್ಟೊಬರ್ 3 ಕೊನೆಯ ದಿನವಾಗಿದೆ. ಇನ್ನು ಈ ಹಿಂದೆ ಮಂಜೇಶ್ವರ ವಿಧಾನಸಭಾ ಕ್ಷೇತ್ರ ಶಾಸಕರಾಗಿದ್ದ ಪಿ. ಬಿ. ಅಬ್ದುಲ್ ರಜಾಕ್ ರವರ ನಿಧನದಿಂದ ಕ್ಷೇತ್ರ ತೆರವಾಗಿತ್ತು.