ವಿಟ್ಲ, ಸೆ 23(DaijiworldNews/SM): ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಗ್ಯಾಸ್ ಟ್ಯಾಂಕರ್ ಚರಂಡಿ ಉರುಳಿದ ಘಟನೆ ಸೋಮವಾರ ಸಂಭವಿಸಿದೆ. ಟ್ಯಾಂಕರ್ ಖಾಲಿಯಾಗಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.
ಟ್ಯಾಂಕರ್ ಬೆಂಗಳೂರಿಗೆ ಅನಿಲ ರವಾನೆ ಮಾಡಿ ಮರಳುತ್ತಿತ್ತು. ಈ ವೇಳೆ ಘಟನೆ ಸಂಭವಿಸಿದೆ. ಟ್ಯಾಂಕರ್ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ಎದುರಿನಿಂದ ಬರುತ್ತಿದ್ದ ಬಸ್ಸನ್ನು ತಪ್ಪಿಸುವ ಭರದಲ್ಲಿ ಟ್ಯಾಂಕರ್ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಹಾಗೂ ಹೆದ್ದಾರಿ ಬದಿಯ ಕಮರಿಗೆ ಮಗುಚಿದ ಬಿದ್ದಿದೆ.
ಘಟನೆಯಲ್ಲಿ ಟ್ಯಾಂಕರ್ ಚಾಲಕ ತಮಿಳುನಾಡು ನಿವಾಸಿ ರಾಜ ಎಂಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪರಾಗಿದ್ದಾರೆ.