ಕಾರ್ಕಳ, ಸೆ 25 (Daijiworld News/MSP): ಮಹಾತ್ಮ ಗಾಂಧೀಜಿಯವರ ಕನಸ್ಸು ಸಕಾರಗೊಳ್ಳಿಸುವ ಜೊತೆಗೆ ಪ್ರವಾಸೋದ್ಯಮ ಅಭಿವೃದ್ಧಿ, ಪರಿಸರ ಸಂರಕ್ಷಣೆಗೊಳಿಸುವ ನಿಟ್ಟಿನಲ್ಲಿ ಗಾಂಧೀಜಿ-150 ಸ್ವಚ್ಛತೆಗೆ ಸ್ವಲ್ಪ ಹೊತ್ತು ಕಾರ್ಯಕ್ರಮವನ್ನು ತಾಲೂಕು ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ವಿ.ಸುನೀಲ್ ಕುಮಾರ್ ಹೇಳಿದರು.
ತಾಲೂಕು ಪಂಚಾಯತ್ನ ಮೇಜರ್ ಉಣ್ಣಿಕೃಷ್ಣನ್ ಸಭಾಂಗಣದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಅವರು ಅಧ್ಯಕ್ಷತೆವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಕ್ರಿಯಾವಾಗಿ ಪಾಲ್ಗೊಳ್ಳುವ ಎರಡು ಗ್ರಾಮ ಪಂಚಾಯತ್ಗಳನ್ನು ಇದೇ ಸಂದರ್ಭದಲ್ಲಿ ಗುರುತಿಸುವ ಕಾರ್ಯಕ್ಕೆ ಹೆಬ್ರಿ,ಕಾರ್ಕಳ ತಾಲೂಕು ಆಡಳಿತಗಳು ಮುಂದಾಗಲಿದೆ. ಗ್ರಾಮ ಪಂಚಾಯತ್ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ತಲಾ 10 ಲಕ್ಷದಂತೆ ಎರಡು ಗ್ರಾಮಪಂಚಾಯತ್ಗಳಿಗೆ ನೀಡಲು ಬದ್ಧನೆಂದು ಸುನೀಲ್ಕುಮಾರ್ ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
ತಹಶೀಲ್ದಾರ್ ಪುರಂದರ ಹೆಗ್ಡೆ, ಹೆಬ್ರಿ ತಹಶೀಲ್ದಾರ್ ಮಹೇಶ್ವಚಂದ್ರ , ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್, ತಾಲೂಕು ಪಂಚಾಯತ್ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಉಡುಪಿ ಜಿಲ್ಲಾ ಪಂಚಾಯತ್ ಕೃಷಿ ಮತ್ತು ಕೈಗಾರಿಕೆ ಸ್ಥಾಯೀ ಸಮಿತಿ ಅಧ್ಯಕ್ಷ ಉದಯ ಎಸ್.ಕೋಟ್ಯಾನ್, ಜಿಲ್ಲಾ ಪಂಚಾಯತ್ ಸದಸ್ಯರಾದ ದಿವ್ಯಶ್ರೀ ಅಮೀನ್, ರೇಷ್ಮಾ ಶೆಟ್ಟಿ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಗೋಪಾಲ ಮೂಲ್ಯ, ಭುವನೇಂದ್ರ ಪದವಿ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಕೊಟ್ಯಾನ್, ಎಸ್ಆರ್ಡಿ ಯ ಮುಖ್ಯ ತರಬೇತುದಾರ ಜಯಂತ್ ರಾವ್ ಮೊದಲಾದವರು ಉಪಸ್ಥಿತರಿದ್ದರು. ಯೋಗೀಶ್ ಕಿಣಿ ಪ್ರಾರ್ಥನೆಗೈದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ. ಹರ್ಷ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಧನ್ಯವಾದವಿತ್ತರು.