ಸುಳ್ಯ ಸೆ14: ಮಾಣಿ - ಮೈಸೂರು ರಾಜ್ಯ ಹೆದ್ದಾರಿಯ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡೆಪಾಲ ಎಂಬಲ್ಲಿ ಸೇತುವೆ ಅವೈಜ್ಞಾನಿಕವಾಗಿ ನಿರ್ಮಾಣವಾದ ಪರಿಣಾಮ ಇಲ್ಲಿ ಅಪಘಾತಗಳು ಹೆಚ್ಚುತ್ತಿವೆ. ಮಾಣಿ - ಮೈಸೂರು ರಾಜ್ಯ ಹೆದ್ದಾರಿ ಕಾಮಗಾರಿ ಮೇಲ್ದರ್ಜೆಗೆ ಏರಿಸುವ ಕಾಮಗಾರಿ ನಾಲ್ಕು ವರ್ಷಗಳ ಹಿಂದೆ ನಡೆದಿತ್ತು.ಈ ಸಂದರ್ಭದಲ್ಲಿ.ಕೆ.ಎಂ.ಸಿ ಕಂಪೆನಿ ಗುತ್ತಿಗೆ ವಹಿಸಿಕೊಂಡು ಕಾಮಗಾರಿ ನಡೆಸಿತ್ತು. ಈ ಸಂದರ್ಭದಲ್ಲಿ ಕಡೆಪಾಲದಲ್ಲಿ ಅವೈಜ್ಞಾನಿಕವಾಗಿ ಕಿರಿದಾದ ಸೇತುವೆ ನಿರ್ಮಾಣ ಮಾಡಿದ್ದಾರೆ.ಈ ಸೇತುವೆಯಲ್ಲಿ ಏಕಕಾಲದಲ್ಲಿ ಎರಡು ವಾಹನಗಳು ಮುಂದೆ ಹೋಗಲು ಸಾಧ್ಯವಿಲ್ಲ.ವಾರದ ಹಿಂದೆಯಷ್ಟೆ ಇಲ್ಲಿ ಕಾರೊಂದು ಅಪಘಾತಕ್ಕೀಡಾಗಿತ್ತು.ಈ ಹಿಂದೆ ನಡೆದ ಅಪಘಾತದಲ್ಲೂ ಸಾವು ಸಂಭವಿಸಿದೆ.
ಸುಮಾರು ನಾಲ್ಕು ವರ್ಷಗಳ ಹಿಂದೆ ನಡೆದ ಮಾಣಿ - ಮೈಸೂರು ರಾಜ್ಯ ಹೆದ್ದಾರಿ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿ ನಿರ್ಮಾಣವಾಗಿದ್ದು ಚರಂಡಿ ಇಲ್ಲದೆ ಮಳೆ ನೀರಲ್ಲ ರಸ್ತೆ ಮೇಲೆ ಹರಿದು ಹೋಗುತ್ತಿದೆ. ವಾಹನಗಳು ಡಿಕ್ಕಿ ಹೊಡೆದ ರಭಸಕ್ಕೆ ಸೇತುವೆಯ ಬದಿಯ ತಡೆಗೋಡೆ ಕುಸಿದು ಬಿದ್ದಿವೆ. ಈ ಹಿಂದೆ ಕಡೆಪಾಲ ರಸ್ತೆ ಸಮಸ್ಯೆಯ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿತ್ತು.ಆದರೆ ಯಾವುದೇ ರೀತಿಯ ಪ್ರಯೋಜನವಾಗಿಲ್ಲ.ಇದೀಗ ಸ್ಥಳೀಯರು ಇಲ್ಲಿಯ ಸಮಸ್ಯೆಯ ಬಗ್ಗೆ ಹೋರಾಟಕ್ಕೆ ಇಳಿದಿದ್ದು ಮುಖ್ಯ ಮಂತ್ರಿ,ಜಿಲ್ಲಾಧಿಕಾರಿ,ಪೊಲೀಸ್ ವರಿಷ್ಠಾಧಿಕಾರಿ,ಜಿಲ್ಲಾ ಉಸ್ತುವಾರಿ ಮಂತ್ರಿ ಸೇರಿದಂತೆ ಹಲವರಿಗೆ ಪತ್ರ ಬರೆದು ಸೇತುವೆ ಸಮಸ್ಯೆಯನ್ನು ಪರಿಹಾರ ಮಾಡಿಕೊಡಬೇಕೆಂದು ವಿನಂತಿಸಿಕೊಂಡಿದ್ದಾರೆ. ಬೇಡಿಕೆ ಇಡೇರದಿದ್ದರೆ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಸಿದ್ದಾರೆ.