ಉಜಿರೆ, ಅ 2 (Daijiworld News/RD): ಸೂರ್ಯನ ಸುತ್ತ ವೃತ್ತಾಕಾರದ ಉಂಗುರದಂಥ ಆಕೃತಿಯೊಂದು ಆವರಿಸಿದ್ದು, ಜನರನ್ನು ನಿಬ್ಬೆರಗಾಗಿಸಿದ್ದು, ಈ ಅಪರೂಪದ ದೃಶ್ಯ ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ಬುಧವಾರ ಮಧ್ಯಾಹ್ನ ಆಗಸದಲ್ಲಿ ಕಂಡುಬಂತು.
ಮಧ್ಯಾಹ್ನ 11 ಗಂಟೆ ಸುಮಾರಿಗೆ ಆರಂಭವಾದ ಈ ವಿದ್ಯಮಾನ ಸುಮಾರು 20 ನಿಮಿಷಗಳ ವರೆಗೆ ಗೋಚರಿಸಿದ್ದು, ಜನರು ಕೂತೂಹಲದಿಂದ ವೀಕ್ಷಿಸಿದರು. ಜೊತೆಗೆ ಹಲವರು ಈ ದೃಶ್ಯವನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲಾತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
ಸೂರ್ಯನ ಸುತ್ತಲೂ ಆವರಿಸಿರುವ ಮೋಡದಲ್ಲಿ ಹುದುಗಿರುವ ಮಂಜುಗಡ್ಡೆ ಕಣಗಳ ಮೇಲೆ ಬೆಳಕು ಹರಿದ ಪರಿಣಾಮ ಆಕರ್ಷಕ ವೃತ್ತ ಗೋಚರಿಸಿದೆ. ಕಾಮನಬಿಲ್ಲು ಸೃಷ್ಟಿಯಾದಂತೆ ನಡೆದ ವಿದ್ಯಮಾನ ಇದಾಗಿದ್ದು ಬಣ್ಣಗಳಲ್ಲಿ ಮಾತ್ರ ವ್ಯತ್ಯಾಸ ಕಂಡುಬಂದಿದೆ. ವಾತಾವರಣದಲ್ಲಿ ತೇವಾಂಶ ಹೆಚ್ಚು ಇರುವ ಮತ್ತು ಮಳೆ ಬರುವ ಮುನ್ಸೂಚನೆಯನ್ನು ಇದು ನೀಡುತ್ತದೆ.