ಕುಂದಾಪುರ, ಅ 6 (Daijiworld News/RD): ಇಲ್ಲಿನ ಸಮೀಪದ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಾಡಿ ಹಿರಿಯ ಪ್ರಾಥಮಿಕ ಶಾಲೆ ಬಳಿ ಅಕೇಶಿಯ ಮತ್ತು ಮಾವಿನ ಮರದ ತೋಪಿನಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದೆ.
ಕಳೆದ ವರ್ಷ ಇದೇ ಪ್ರದೇಶದಲ್ಲಿ ಚಿರತೆ ಬೋನಿಗೆ ಬಿದ್ದಿತ್ತು. ಚಿರತೆ ಸಂಚಾರದಿಂದಾಗಿ ಸ್ಥಳೀಯರು ಭಯ ಭೀತರಾಗಿದ್ದರು. ಹೀಗಾಗಿ ಕಳೆದ ಒಂದು ತಿಂಗಳಿನಿಂದ ಅರಣ್ಯ ಇಲಾಖೆ ಬೋನು ಇರಿಸಲಾಗಿತ್ತು.
ಸುಮಾರು 10 ವರ್ಷ ಪ್ರಾಯದ ಗಂಡು ಚಿರತೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ ಇದೆ ಪ್ರದೇಶದ ಸುತ್ತಮುತ್ತ ಒಟ್ಟು ಐದು ಚಿರತೆಗಳನ್ನು ಸೆರೆ ಹಿಡಿಯಲಾಗಿತ್ತು. ಚಿರತೆ ಬೋನಿಗೆ ಬಿದ್ದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನೂರಾರು ಮಂದಿ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಅತ್ಯಂತ ಕುತೂಹಲದಿಂದ ವೀಕ್ಷಿಸಿದರು.