ಉಡುಪಿ, ಅ.07(Daijiworld News/SS): ಫ್ಲೆಕ್ಸ್ ಬ್ಯಾನರ್ಗಳನ್ನು ಸಂಪೂರ್ಣ ನಿಷೇಧಿಸಲಾಗಿದ್ದರೂ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಫ್ಲೆಕ್ಸ್ ಬ್ಯಾನರ್ ಮತ್ತು ಅನಧಿಕೃತ ಬ್ಯಾನರ್ಗಳು ಕಂಡುಬಂದಿದ್ದು, ತಕ್ಷಣ ತೆರವುಗೊಳಿಸಬೇಕು ಎಂದು ಡಿಸಿ ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಯಾವುದೇ ವ್ಯಕ್ತಿ, ಅಂಗಡಿ ಮಾಲೀಕ, ಮಾರಾಟಗಾರ, ಸಗಟು ಮಾರಾಟಗಾರ ಅಥವಾ ಚಿಲ್ಲರೆ ವ್ಯಾಪಾರಿ, ವ್ಯಾಪಾರಿ ಮತ್ತು ಮಾರಾಟಗಾರರು, ನಿಷೇಧಿತ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಫ್ಲೆಕ್ಸ್, ಪ್ಲಾಸ್ಟಿಕ್ ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಮ್, ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೋಕೂಲ್ ಮತ್ತು ಪ್ಲಾಸ್ಟಿಕ್ ಮೈಕೋ ಬೀಡ್ಸ್ನಿಂದ ತಯಾರಾದ ವಸ್ತುಗಳ ಬಳಕೆ, ತಯಾರಿಕೆ, ಸರಬರಾಜು, ಸಂಗ್ರಹಣೆ ಸಾಗಾಣಿಕೆ, ಮಾರಾಟ ಮತ್ತು ವಿತರಣೆ ಮಾಡುವುದನ್ನು ನಿಷೇಧಿಸಲಾಗಿದೆ. ನಿಯಮಗಳನ್ನು ಪಾಲಿಸದಿದ್ದಲ್ಲಿ ದಂಡ ವಿಧಿಸುವುದು ಅನಿವಾರ್ಯ ಎಂದು ಹೇಳಿದ್ದಾರೆ.
ಫ್ಲೆಕ್ಸ್ ಬ್ಯಾನರ್ಗಳನ್ನು ಸಂಪೂರ್ಣ ನಿಷೇಧಿಸಲಾಗಿದ್ದರೂ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಫ್ಲೆಕ್ಸ್ ಬ್ಯಾನರ್ ಮತ್ತು ಅನಧಿಕೃತ ಬ್ಯಾನರ್ಗಳು ಕಂಡುಬಂದಿದ್ದು, ತಕ್ಷಣ ತೆರವುಗೊಳಿಸಬೇಕು. ಮೊದಲ ಬಾರಿಗೆ ನಿಯಮ ಉಲ್ಲಂಘಿಸಿದ್ದಲ್ಲಿ 1000 ರೂ ಹಾಗೂ ಎರಡನೇ ಬಾರಿ ನಿಯಮ ಉಲ್ಲಂಘಿಸಿದ್ದಲ್ಲಿ 2000 ರೂ. ದಂಡ ವಿಧಿಸಲಾಗುವುದು. ಮೂರನೇ ಬಾರಿ ಪ್ರಕರಣ ದಾಖಲಿಸುವುದು ಅಥವಾ ಅಂಗಡಿ ಪರವಾನಗಿ ರದ್ದುಗೊಳಿಸಲಾಗುವುದು. ಬದಲಿ ವ್ಯವಸ್ಥೆಯಾಗಿ ಬಟ್ಟೆಯಿಂದ ಅಥವಾ ಪೇಪರ್ನಿಂದ ತಯಾರಿಸುವ ಬ್ಯಾನರ್, ತೋರಣ ಬಂಟಿಗ್ಸ್, ಬಾವುಟ ಇವುಗಳನ್ನು ಮಾತ್ರ ಉಪಯೋಗಿಸುವಂತೆ ಸೂಚಿಸಬೇಕು. ಈ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ತಪ್ಪಿದ್ದಲ್ಲಿ ಸಂಬಂಧಿಸಿದ ಮುಖ್ಯಾಧಿಕಾರಿ, ಪೌರಾಯುಕ್ತರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೆ, ಜಿಲ್ಲೆಯ ಎಲ್ಲ ಗ್ರಾಪಂಗಳಿಗೆ ಮತ್ತು ದೇವಸ್ಥಾನ ಹಾಗೂ ಧಾರ್ಮಿಕ ಕೇಂದ್ರಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡುವಂತೆ ಹಾಗೂ ಸರ್ಕಾರದ ಆದೇಶವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.