ಬಂಟ್ವಾಳ, ಅ 09 (DaijiworldNews/SM): ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಹೊತ್ತಿ ಉರಿದ ಘಟನೆ ಬಂಟ್ವಾಳದ ಕಂಚಿಕಾರ್ ಪೇಟೆಯಲ್ಲಿ ನಡೆದಿದೆ.
ಗೂಡಿನಬಳಿ ನಿವಾಸಿ ಸಾದಿಕ್ ಎಂಬವರಿಗೆ ಸೇರಿದ ಮಾರುತಿ-800 ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಾದಿಕ್ ಅವರು ಕಾರು ಚಲಾಯಿಸಿಕೊಂಡು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಕಾರಿನಲ್ಲಿ ಸುಟ್ಟ ವಾಸನೆ ಬರಲಾರಂಭಿಸಿದೆ.
ಈ ಹಿನ್ನೆಲೆಯಲ್ಲಿ ಅವರು ಕಾರನ್ನು ನಿಲ್ಲಿಸಿ ಪರೀಕ್ಷಿಸಿದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.