ಮಂಗಳೂರು, ಜ 5: ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ದೀಪಕ್ ರಾವ್ ಮನೆಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಮೊಯ್ದೀನ್ ಬಾವ ಭೇಟಿ ನೀಡಿದರು.
ದೀಪಕ್ ಸಹೋದರನಿಗೆ ಕೆಲಸ ಕೊಡಿಸುವ ಭರವಸೆ ನೀಡಿದ ಅವರು, ಹತ್ಯೆ ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ ಎಲ್ಲಾ ಸತ್ಯ ಹೊರಬೀಳಲಿದೆ. ಹತ್ಯೆಗೈದ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಬೇಕು ಎಂದು ತಿಳಿಸಿದರು.