ಪುತ್ತೂರು, ಅ 16 (Daijiworld News/MSP): ಪರೀಕ್ಷಾ ಶುಲ್ಕ ಪಾವತಿಸಲು ಬಂದ ಅಪ್ರಾಪ್ತ ವಯಸ್ಸಿನ ಶಾಲಾ ವಿದ್ಯಾರ್ಥಿನಿಗೆ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಾಲೂಕಿನ ಸರ್ಕಾರಿ ಪ್ರೌಢ ಶಾಲೆಯೊಂದರಲ್ಲಿ ಪರೀಕ್ಷಾ ಶುಲ್ಕ ಪಾವತಿಸಲು ಶಾಲೆಗೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಶಾಲಾ ಪ್ರಭಾರ ಮುಖ್ಯ ಶಿಕ್ಷಕನಾಗಿದ್ದ ಪುತ್ತೂರು ತಾಲೂಕು ಒಳಮೊಗ್ರು ನಿವಾಸಿಯಾದ ನಾಝೀರ್ (40) ತನ್ನ ಕಾಮ ದೃಷ್ಟಿ ಬೀರಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ
ಸಂತ್ರಸ್ತೆ ಬಾಲಕಿ ಈ ಕುರಿತು ಅ. 16 ರ ಬುಧವಾರ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ದೂರು ನೀಡಿದ್ದು, ತಕ್ಷಣ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ.