ಮಂಗಳೂರು, ಅ 17 (DaijiworldNews/SM): ಹೆಂಡತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ನೀಡಿದೆ. ಮಂಗಳೂರಿನ ಒಂದನೇ ಹೆಚ್ಚುವರಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ವಿಲಿಯಂ ಲೋಬೋ ಪ್ರಕರಣದ ಅಪರಾಧಿಯಾಗಿದ್ದು, ಆತನಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ದಂಡ ವಿಧಿಸಿ ಆದೇಶ ನೀಡಿದೆ.
ಇನ್ನು 2017ರಲ್ಲಿ ಉರ್ವ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣ ನಡೆದಿತ್ತು. ಅಪರಾಧಿ ವಿಲಿಯಂ ತನ್ನ ಪತ್ನಿಯನ್ನು ಕೊಲೆ ಮಾಡಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದ ಮಂಗಳೂರಿನ ಉರ್ವ ಠಾಣಾ ಪೊಲೀಸರು ಬಳಿಕ ಪ್ರಕರಣವನ್ನು ಕೋರ್ಟ್ ಗೆ ಒಪ್ಪಿಸಿದ್ದರು.
ನಿರಂತರ ವಿಚಾರಣೆಯ ಬಳಿಕ ಆಪರಾಧಿ ನಡೆಸಿರುವ ಕೃತ್ಯ ಸಾಬೀತಾಗಿದೆ. ಹಾಗೂ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ನೀಡಿದೆ.