ಚಿಕ್ಕಮಗಳೂರು, ಜ 6: "ಗಲಭೆ ಸೃಷ್ಟಿಸುವ ಸಂಘಟನೆಗಳನ್ನ ಬ್ಯಾನ್ ಮಾಡುತ್ತೇನೆ ಎಂದು ನಾನೆಲ್ಲೂ ಹೇಳಿಲ್ಲ" ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮತೀಯ ಗಲಭೆಗಳಿಗೆ ಕಾರಣವಾಗುವ ಸಂಘಟನೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇನೆಂದು ಹೇಳಿದ್ದೆ. ಆದರೆ ಸಂಘಟನೆಗಳನ್ನು ಬ್ಯಾನ್ ಮಾಡುವ ಬಗ್ಗೆ ಚಿಂತನೆ ನಡೆಸಿಲ್ಲ ಎಂದಿದ್ದಾರೆ.
ದೀಪಕ್ ಕೊಲೆ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡುವ ವೇಳೆ ಸಂಘಟನೆ ನಿಷೇಧಿಸುವ ಹೇಳಿಕೆಯನ್ನು ಸಿಎಂ ನೀಡಿದ್ದರೆಂದು ಈ ಹಿಂದೆ ವರದಿಯಾಗಿತ್ತು. ಇದೀಗ, ಗಲಭೆ ಸೃಷ್ಟಿಸುತ್ತಿರುವ ಸಂಘಟನೆಗಳನ್ನು ಬ್ಯಾನ್ ಮಾಡುತ್ತೇನೆ ಎಂದು ಹೇಳಿಲ್ಲ ಎಂದು ಹೇಳಿಕೆಗೆ ಸಿಎಂ ಸ್ಪಷ್ಟನೆ ನೀಡಿದ್ದಾರೆ.