ಮಂಗಳೂರು, ಜ 6; ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಸರಳ ಸಜ್ಜನ ರಾಜಕಾರಣಿ ಎಂದು ಗುರುತಿಸಿಕೊಂಡಿರುವ ಜನಾರ್ದನ ಪೂಜಾರಿ ಅವರ ಆತ್ಮಚರಿತ್ರೆ ಪುಸ್ತಕ ಬಿಡುಗಡೆಗೆ ಸಿದ್ಧವಾಗಿದೆ.
ಪೂಜಾರಿಯವರ ಆತ್ಮಚರಿತ್ರೆ ಪುಸ್ತಕ ಬಿಡುಗಡೆಗೆ ಸಿದ್ಧಗೊಂಡಿರುವುದು ರಾಜ್ಯ ರಾಜಕಾರಣದಲ್ಲಿ ಭಯದ ವಾತಾವರಣ ನಿರ್ಮಿಸಿದೆ. ಯಾಕಂದರೆ ಪೂಜಾರಿಯವರ ಆತ್ಮಚರಿತ್ರೆ ಪುಸ್ತಕದಲ್ಲಿ ಅನೇಕ ವರುಷಗಳ ರಾಜಕೀಯ ಪಯಣ, ರಾಜಕೀಯ ಜೀವನದಲ್ಲಿ ಪೂಜಾರಿಯವರ ಅನುಭವ, ರಾಜಕೀಯದಲ್ಲಿ ಕಳೆದುಕೊಂಡಿರುವುದು ಏನು..?, ಪಡೆದುಕೊಂಡಿರುವುದು ಏನು..?, ಹಿಂದೆ ನಿಂತು ಬೆನ್ನಿಗೆ ಚೂರಿ ಹಾಕಿದವರು ಯಾರು..? ಈ ಎಲ್ಲಾ ಅಂಶಗಳನ್ನು ಎಳೆಎಳೆಯಾಗಿ ವಿವರಿಸಿದ್ದಾರೆ. ಪೂಜಾರಿಯವರ ಜೀವನ ಸೇರಿದಂತೆ ರಾಜಕೀಯದ ಎಲ್ಲಾ ಸಿಹಿ ಕಹಿ ಅನುಭವಗಳು ಈ ಪುಸ್ತಕದಲ್ಲಿ ಮುದ್ರಿಸಲಾಗಿರುವುದರಿಂದ ರಾಜ್ಯ ರಾಜಕಾರಣದಲ್ಲಿ ಕೊಂಚ ಭಯದ ವಾತಾವರಣ ನಿರ್ಮಾಣವಾಗಿದೆ.
ಇದೇ ಜನವರಿ 26 ಗಣರಾಜ್ಯೋತ್ಸವದ ದಿನ ಪುಸ್ತಕ ಬಿಡುಗಡೆಗೊಳ್ಳಲಿದೆ ಎಂದು ತಿಳಿದುಬಂದಿದೆ.