ಸಾಗರ, ಜ 6: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಹಂತಕರ ಸುಳಿವು ಸಿಕ್ಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಗೌರಿ ಹತ್ಯೆ ಪ್ರಕರಣದ ಹಂತಕರ ವಿವರವನ್ನು ಸಾಕ್ಷಿ ಸಮೇತವಾಗಿ ಶಿಘ್ರದಲ್ಲೇ ತಿಳಿಸುತ್ತೇವೆ. ವಿಶೇಷ ತನಿಖಾ ದಳಕ್ಕೆ ಪ್ರಮುಖ ಆರೋಪಿಗಳ ಸುಳಿವು ಸಿಕ್ಕಿದೆ ಎಂದು ಹೇಳಿದರು.
ಗೌರಿ ಹತ್ಯೆ ಪೂರ್ವಯೋಜಿತ ಕೃತ್ಯವಾಗಿದೆ. ಬೇರೆ ಬೇರೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ತಂಡವೇ ಗೌರಿ ಹತ್ಯೆ ನಡೆಸಿದೆ. ಎಸ್ಐಟಿ ಆರೋಪಿಗಳ ಪೂರ್ವಾಪರ ಸಾಕ್ಷ್ಯಾಧಾರಗಳನ್ನು ಕಲೆ ಹಾಕುತ್ತಿದೆ ಎಂದು ತಿಳಿಸಿದರು.