ಮಂಗಳೂರು ಜ 07 : ನಗರದ ಕೊಟ್ಟಾರ ಚೌಕಿ ಬಳಿ ಜ 3 ರ ರಾತ್ರಿ ದುಷ್ಕರ್ಮಿಗಳಿಂದ ಹಲ್ಲೆಗೆ ಒಳಗಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ
ಬಷೀರ್ ( 47) ಜ 7 ರ ಭಾನುವಾರ ಬೆಳಗ್ಗೆ ಸಾವನಪ್ಪಿದ್ದಾರೆ.
ಆಕಾಶಭವನ ನಿವಾಸಿ ಬಷೀರ್ ಎಂದಿನಂತೆ ರಾತ್ರಿ ಕೊಟ್ಟಾರ ಚೌಕಿ ಬಳಿ ಇರುವ ತನ್ನ ಫಾಸ್ಟ್ ಪುಡ್ ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದಾಗ ಏಳು ಮಂದಿ ದುಷ್ಕರ್ಮಿಗಳು ಏಕಾಏಕಿ ಬಂದು ಅಂಗಡಿ ಎದುರೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು.
ಕಾಟಿಪಳ್ಳದ ದೀಪಕ್ ರಾವ್ ಹತ್ಯೆಯಾದ ಬೆನ್ನಲ್ಲೇ ಬಷೀರ್ ಮೇಲೆ ಮಾರಕಾಸ್ತ್ರಗಳಿಂದ ಬರ್ಬರವಾಗಿ ದಾಳಿ ನಡೆದಿದ್ದು, ಹೊಟ್ಟೆ ಮತ್ತು ತಲೆಭಾಗಕ್ಕೆ ತೀವ್ರ ಗಾಯವಾಗಿತ್ತು. ಕಳೆದ ನಾಲ್ಕು ದಿನಗಳಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಒಳಗಾಗಿದ್ದರು.ಆದರೆ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು ಜ 7 ರ ಭಾನುವಾರ ಬೆಳಗ್ಗೆ ಸುಮಾರು 8.30 ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ.
ಬಷೀರ್ ಮೃತಪಟ್ಟಿರುವ ಹಿನ್ನಲೆಯಲ್ಲಿ ಪೊಲೀಸರು ಮಂಗಳೂರು ಹಾಗೂ ನಗರದ ಸುತ್ತಮುತ್ತ ವ್ಯಾಪಕ ಕಟ್ಟೆಚರ ವಹಿಸಿದ್ದಾರೆ