ಮಂಗಳೂರು, ಅ 24 (Daijiworld News/MSP): ಅರಬ್ಭಿ ಸಮುದ್ರ ಮತ್ತು ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ರೆಡ್ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರು ಸೂಕ್ತ ಎಚ್ಚರಿಕೆ ವಹಿಸುವಂತೆ ಪ್ರಕಟನೆಯಲ್ಲಿ ತಿಳಿಸಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ ಆರಂಭವಾಗಿದ್ದು, ಸಾಧಾರಣ ಮಳೆಯಾಗುತ್ತಿದೆ. ವಾಯುಭಾರ ಕುಸಿತ ಪ್ರಭಾವದಿಂದ ಕೇರಳ-ಕರ್ನಾಟಕ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಅಲ್ಲಲ್ಲಿ ಮುಂದಿನ ಎರಡು ದಿನಗಳವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುತ್ತದೆ.ಜಿಲ್ಲೆಯಲ್ಲಿ 115.5 ಮಿ.ಮೀ ನಿಂದ 204.4 ಮೀ ಮೀವರೆಗೆ ಮಳೆ ಬೀಳುವ ಸಾಧ್ಯತೆ ಇದೆ.
ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕಿಳಿಯದಂತೆ ಕೂಡ ಎಚ್ಚರಿಕೆ ನೀಡಲಾಗಿದೆ.