ಉಡುಪಿ, ಅ 24 (DaijiworldNews/SM): ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ದಾಖಲಿಸಲಿದೆ. ಎಲ್ಲಾ ಹದಿನೈದು ಕ್ಷೇತ್ರಗಳಲ್ಲೂ ಬಿಜೆಪಿಗೆ ಗೆಲ್ವು ಖಚಿತ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಕ್ಕೆ ಪ್ರತಿಕೆಯೆ ನೀಡಿದ ಅವರು, ಮಹಾರಾಷ್ಟ್ರ ಹಾಗೂ ಹರಿಯಾಣಗಳಲ್ಲಿ ನಾವು ಗೆಲುವು ಸಾಧಿಸಿದ್ದೇವೆ. ಎರಡೂ ರಾಜ್ಯದಲ್ಲಿ ಬಿಜೆಪಿಯೇ ಸರ್ಕಾರ ರಚಿಸುತ್ತದೆ. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದರು.
ಇನ್ನು ಡಿಕೆಶಿ ಬಿಡುಗಡೆಗೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಡಿಕೆಶಿ ಪ್ರಕರಣ ಉಪ ಚುನಾವಣಾ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ನೂರು ವರ್ಷಕ್ಕೂ ಮೀರಿದ ಪಕ್ಷ ಕಾಂಗ್ರೆಸ್. ಈ ಪಕ್ಷ ತನ್ನ ವಿಚಾರಧಾರೆಯನ್ನು ಮೀರಿ ವರ್ತಿಸುತ್ತಿದೆ. ಬಿಜೆಪಿ ಪಕ್ಷವು ಗಾಂಧಿ ಪಥದಲ್ಲಿದೆ. ಕಾಂಗ್ರೆಸ್ ಜವಾಬ್ದಾರಿ ರಹಿತ ನಡವಳಿಕೆ ತೋರಿಸುತ್ತಿದೆ ಎಂದರು.
ನೆರೆ ಪರಿಹಾರದಿಂದ ರಾಜ್ಯ ಸರ್ಕಾರ ಸ್ವಲ್ಪವೂ ಹಿಂದೆ ಸರಿದಿಲ್ಲ. ಉಪ ಚುನಾವಣೆ ರಾಜಕೀಯ ವಿಚಾರ. ಆದರೆ, ನೆರೆ ಪರಿಹಾರ ಕಾರ್ಯಕ್ಕೆ ಉಪ ಚುನಾವಣೆಯಿಂದ ಅಡ್ಡಿಯಾಗುವುದಿಲ್ಲ. 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಪ್ರವಾಹ ಮೊದಲೇ ಬಂದಿತ್ತು. ಈಗ ಮತ್ತೆ ಮೂರು ದಿನಗಳಿಂದ ಮಳೆಯಾಗುತ್ತಿದೆ. ನೆರೆ ಪರಿಹಾರಕ್ಕೆ ಅನುದಾನ ಬಿಡುಗಡೆ ಮಾಡಲು ಸರ್ಕಾರ ಬದ್ದವಾಗಿದೆ ಎಂದರು.